ಕೊರೋನಾ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಸರಿಯಾಗಿ ಆಹಾರ ಪೂರೈಕೆ ಮಾಡದ ರೇಷನ್ ಅಂಗಡಿ ಅಮಾನತು

0
295

ಕೋವಿಡ್ 19 ರೋಗದಿಂದ ದೇಶ ಸಂಕಷ್ಟದಲ್ಲಿದ್ದು, ರೈತ ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು. ತುಮಕೂರು ಜಿಲ್ಲೆಯ/ತಾಲ್ಲೂಕಿನ ಬುಗುಡನಹಳ್ಳಿ ಗ್ರಾಮದಲ್ಲಿ ಕೊರೋನಾ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪಡಿತರ ವಿತರಿಸಿ ಮಾತನಾಡಿದ ಅವರು, ಆಹಾರವನ್ನು ಸರಿಯಾಗಿ ಪೂರೈಕೆ ಮಾಡದ 150 ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ, ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಹಣ ಪಡೆಯದಂತೆ ಮನವಿ ಮಾಡಿದರೂ ಕೇಳದೇ ಮೋಸ ಮಾಡುತ್ತಿದ್ದ ಅಂಗಡಿಗಳು ಹಾಗೂ ಕಾರ್ಯ ನಿರ್ವಹಿಸದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

ಕೊರೋನಾ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ನೀಡುವ ಪಡಿತರವನ್ನು 4.65 ಕೋಟಿ ಮಂದಿ ಪಡೆದಿದ್ದಾರೆ, ಕೇಂದ್ರ ಸರ್ಕಾರದಿಂದ ನೀಡುವ ಪಡಿತರವನ್ನು ಮೇ.01ರಿಂದ ವಿತರಿಸಲು ಕ್ರಮವಹಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಪಡಿತರವನ್ನು ನೀಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಪಡಿತರ ಚೀಟಿ ಹೊಂದಿರುವವರಿಗೆ ಉಚಿತವಾಗಿ ನೀಡುವಂತಾಗಬೇಕು ಎಂದರು.

ಮುಖ್ಯಮಂತ್ರಿ ಅನಿಲ ಭ್ಯಾಗ್ಯ ಹಾಗೂ ಉಜ್ವಲ್ ಯೋಜನೆಯಡಿ ಸಂಪರ್ಕ ಪಡೆದಿರುವವರಿಗೆ ಮೂರು ತಿಂಗಳ ಸಹಾಯಧನವನ್ನು ನೀಡಲಾಗುತ್ತಿದೆ, ಲಾಕ್ ಡೌನ್ ನಿಂದ ಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರು, ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದವರಿಗೂ ಪಡಿತರವನ್ನು ವಿತರಿಸಲು ಸಿಎಂ ಯಡಿಯೂರಪ್ಪ ಅವರು ಕ್ರಮವಹಿಸಿದ್ದು, ಆದ್ಯತೆ ಮೇಲೆ ಎಪಿಎಲ್ ಕಾರ್ಡ್ ದಾರರಿಗೂ ಪಡಿತರವನ್ನು ನೀಡಲಾಗುತ್ತಿದೆ, ದೇಶ ಸ್ತಬ್ಧವಾಗಿದೆ, ಕೊರೋನಾ ವಿರುದ್ಧ ಹೋರಾಡಲು ಯುದ್ಧ ಮಾಡುವಂತೆ ಪ್ರಧಾನಿ ಮೋದಿ ಅವರು ನೀಡಿದ ಕರೆಯಂತೆ ದೇಶದ ಜನ ಯುದ್ಧ ಮಾಡಿದ್ದಾರೆ, ಕೊನೆ ವರೆಗೆ ಹೋರಾಡಬೇಕಿದೆ ಎಂದು ತಿಳಿಸಿದರು. ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಎಚ್ಚರಿಕೆ ಅಗತ್ಯವಾಗಿದ್ದು, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್ ಕಡ್ಡಾಯವಾಗಿ ಬಳಸುವ ಮೂಲಕ ಜೀವನ, ಜೀವವನ್ನು ಉಳಿಸಿಕೊಳ್ಳಬೇಕು, ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೋರೋಣ ವಾರಿಯೊರ್ಸ್ ಆದ ವೈದ್ಯಕೀಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ನರ್ಸ್, ಪೊಲೀಸರು, ಲೈನ್ ಮೆನ್ ಗಳಿಗೆ ಪುಷ್ಪವೃಷ್ಠಿಯನ್ನು ಮಾಡುವ ಮೂಲಕ ಗೌರವಿಸಲಾಯಿತು.

Mallikarjuna Raju, Bureau Chief, Karnataka State, NAC NEWS CHANNEL. 9449023764

Nalla Sanjeeva Reddy,
Telangana State Bureau Chief & Incharge South India,
NAC NEWS CHANNEL.

LEAVE A REPLY

Please enter your comment!
Please enter your name here